Wednesday, October 25, 2017

ಮೌನ ತಬ್ಬಿತು ನೆಲವ..


ಮೌನ ತಬ್ಬಿತು ನೆಲವ.. ಜುಮ್ಮೆನೆ ಪುಳಕಗೊಂಡಿತು ಧಾರಿಣಿ
ನೋಡಿ ನಾಚಿತು ಬಾನು.. ಸೇರಿತು ಕೆಂಪು ಸಂಜೆಯ ಕದಪಲಿ
ಹಕ್ಕಿಗೊರಲಿನ ಸುರತಗಾನಕೆ ಬಿಗಿಯು ನಸುವೆ ಸಡಿಲಿತು
ಬೆಚ್ಚಬೆಚ್ಚನೆ ಉಸಿರಿನಂದದಿ ಗಾಳಿ ಮೆಲ್ಲನೆ ತೆವಳಿತು

ಇರುಳ ಸೆರಗಿನ ನೆಳಲು ಚಾಚಿತು, ಬಾನು ತೆರೆಯಿತು ಕಣ್ಣನು..
ನೆಲವು ತಣಿಯಿತು, ಬೆವರು ಹನಿಯಿತು.. ಭಾಷ್ಪ ನೆನೆಸಿತು ಹುಲ್ಲನು
ಮೌನ ಉರುಳಿತು, ಹೊರಳಿತೆದ್ದಿತು.. ಗಾಳಿ ಭೋರನೆ ಬೀಸಿತು 
ತೆಂಗುಗರಿಗಳ ಚಾಮರಕೆ ಹಾಯೆಂದು ಮೌನವು ಮಲಗಿತು 

- ಗೋಪಾಲಕೃಷ್ಣ ಅಡಿಗ




No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...