Wednesday, October 25, 2017

ತನುವು ನಿನ್ನದು ಮನವು ನಿನ್ನದು..


ತನುವು ನಿನ್ನದು ಮನವು ನಿನ್ನದು
ನನ್ನ ಜೀವನ ಧನವು ನಿನ್ನದು..
ನಾನು ನಿನ್ನವನೆಂಬ ಹೆಮ್ಮೆಯ
ತೃಣವು ಮಾತ್ರವೆ ನನ್ನದು

ನೀನು ಹೊಳೆದರೆ ನಾನು ಹೊಳೆವೆನು
ನೀನು ಬೆಳೆದರೆ ನಾನು ಬೆಳೆವೆನು..
ನನ್ನ ಹರಣದ ಹರಣ ನೀನು
ನನ್ನ ಮರಣದ ಮರಣವು

ನನ್ನ ಮನದಲಿ ನೀನೆ ಯುಕ್ತಿ
ನನ್ನ ಹೃದಯದಿ ನೀನೆ ಭಕ್ತಿ..
ನೀನೆ ಮಾಯಾ ಮೋಹ ಶಕ್ತಿಯು
ನನ್ನ ಜೀವನ ಮುಕ್ತಿಯು

            - ಕುವೆಂಪು



No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...