Wednesday, October 25, 2017

ನಿನ್ನ ಪ್ರೇಮದ ಪರಿಯ ನಾನರಿಯೆ..


ನಿನ್ನ ಪ್ರೇಮದ ಪರಿಯ ನಾನರಿಯೆ ಕನಕಾಂಗಿ
ನಿನ್ನೊಳಿದೆ ನನ್ನ ಮನಸು..

ಹುಣ್ಣಿಮೆಯ ರಾತ್ರಿಯಲಿ ಉಕ್ಕುವುದು ಕಡಲಾಗಿ
ನಿನ್ನೊಲುಮೆ ನನ್ನ ಕಂಡು..

ಸಾಗರನ ಹೃದಯದಲಿ ರತ್ನಪರ್ವತ ಮಾಲೆ
ಮಿಂಚಿನಲಿ ಮೀವುದಂತೆ..

ತೀರದಲಿ ಬಳಕುವಲೆ ಕಣ್ಣ ಚುಂಬಿಸಿ ಮತ್ತೆ
ಸಾಗುವುದು ಕನಸಿನಂತೆ..

ಅಲೆ ಬಂದು ಕರೆಯುವುದು ನಿನ್ನೊಲುಮೆಯರಮನೆಗೆ
ಒಳಗಡಲ ರತ್ನಪುರಿಗೆ..

ಅಲೆಯಿಡುವ ಮುತ್ತಿನಲೆ ಕಾಣುವುದು ನಿನ್ನೊಲುಮೆ -
ಯೊಳಗುಡಿಯ ಮೂರ್ತಿಮಹಿಮೆ..

ನಿನ್ನ ಪ್ರೇಮದ ಪರಿಯ ನಾನರಿಯೆ, ಕನಕಾಂಗಿ
ತಾರೆಯಾಗದೆ ಕಾಣುವೀ ಮಿಂಚು, ನಾಳೆ, ಅರ್ಧಾಂಗಿ..

- ಕೆ. ಎಸ್. ನರಸಿಂಹಸ್ವಾಮಿ




No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...