Wednesday, October 25, 2017

ಸ್ತ್ರೀ ಎಂದರೆ ಅಷ್ಟೆ ಸಾಕೆ?


ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ.. 

ಹಸುರನುಟ್ಟ ಬೆಟ್ಟಗಳಲಿ
ಮೊಲೆ ಹಾಲಿನ ಹೊಳೆಯ ಇಳಿಸಿ
ಬಯಲ ಹಸುರ ನಗಿಸಿದಾಕೆ.. 

ಮರಗಿಡ ಹೂ ಮುಂಗುರುಳನು
ತಂಗಾಳಿಯ ಬೆರಳ ಸವರಿ
ಹಕ್ಕಿಗಿಲಕಿ ಹಿಡಿಸಿದಾಕೆ..

ಮನೆಮನೆಯಲಿ ದೀಪ ಮುಡಿಸಿ
ಹೊತ್ತು ಹೊತ್ತಿಗನ್ನವುಣಿಸಿ
ತಂದೆ ಮಗುವ ತಬ್ಬಿದಾಕೆ.. 

ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ??

             - ಜಿ. ಎಸ್. ಶಿವರುದ್ರಪ್ಪ



No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...