Tuesday, November 14, 2017

ಕೇಳಿ ಆನಂದಿಸಿ: ಮೈಸೂರು ಅನಂತಸ್ವಾಮಿ ಯವರು ಹಾಡಿರುವ "ಬದುಕು ಜಟಕಾಬಂಡಿ.."


ಮೈಸೂರು ಅನಂತಸ್ವಾಮಿ ಯವರ "ಬದುಕು ಜಟಕಾಬಂಡಿ.."

ರಚನೆ: ಡಿ. ವಿ. ಜಿ
ಗಾಯನ ಮತ್ತು ಸಂಗೀತ: ಮೈಸೂರು ಅನಂತಸ್ವಾಮಿ

--------------------------------------------------------

Poet: D. V. G
Music & Singing: Mysore Anantaswamy



ಬದುಕು ಜಟಕಾಬಂಡಿ,
ಬದುಕು ಜಟಕಾಬಂಡಿ,
ವಿಧಿ ಅದರ ಸಾಹೇಬ,
ಕುದುರೆ ನೀನ್,
ಅವನು ಪೇಳ್ದಂತೆ ಪಯಣಿಗರು.
ಮದುವೆಗೋ ಮಸಣಕೋ ಹೋಗೆಂದಕಡೆಗೋಡು
ಪದ ಕುಸಿಯೆ ನೆಲವಿಹುದು ಮಂಕುತಿಮ್ಮ
ಪದ ಕುಸಿಯೆ ನೆಲವಿಹುದು ಮಂಕುತಿಮ್ಮ

ಅಕ್ಕಿಯೊಳಗನ್ನವನು ಮೊದಲಾರು ಕಂಡವರು?
ಅಕ್ಕಿಯೊಳಗನ್ನವನು ಮೊದಲಾರು ಕಂಡವರು?
ಅಕ್ಕರದ ಬರಹಕ್ಕೆ ಮೊದಲಿಗದನಾರು?
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ,
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ,
ದಕ್ಕುವುದೇ ಜಸ ನಿನಗೆ ಮಂಕುತಿಮ್ಮ?
ದಕ್ಕುವುದೇ ಜಸ ನಿನಗೆ ಮಂಕುತಿಮ್ಮ?

ಇಳೆಯಿಂದ ಮೊಳಕೆ ಒಗೆ ಒಂದು ತಮಟೆಗಲಿಲ್ಲ,
ಇಳೆಯಿಂದ ಮೊಳಕೆ ಒಗೆ ಒಂದು ತಮಟೆಗಲಿಲ್ಲ,
ಫಲ ಮಾಗುವಂದು ತ್ತುತ್ತೂರಿ ದನಿಯಿಲ್ಲ,
ಬೆಳಕೀವ ಸೂರ್ಯಚಂದ್ರರದೊಂದು ಸದ್ಹಿಲ್ಲ
ಬೆಳಕೀವ ಸೂರ್ಯಚಂದ್ರರದೊಂದು ಸದ್ಹಿಲ್ಲ
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ

ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು,
ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು,
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ.
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ.
ಎಲ್ಲರೊಳಗೊಂದಾಗು ಮಂಕುತಿಮ್ಮ.
ಎಲ್ಲರೊಳಗೊಂದಾಗು ಮಂಕುತಿಮ್ಮ.

- ಡಿ. ವಿ. ಜಿ



No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...