Sunday, November 19, 2017

ಎಲ್ಲಿ ಜಾರಿತೋ ಮನವು..


ಎಲ್ಲಿ ಜಾರಿತೋ ಮನವು ಎಲ್ಲೇ ಮೀರಿತೋ
ಎಲ್ಲಿ ಅಲೆಯುತಿಹುದೋ ಏಕೆ ನಿಲ್ಲದಾಯಿತೋ

ದೂರದೊಂದು ತೀರದಿಂದ ತೇಲಿ ಪಾರಿಜಾತ ಗಂಧ
ದಾಟಿಬಂದು ಬೇಲಿ ಸಾಲ ಮೀಟಿ ಹಳೆಯ ಮಧುರ ನೋವ

ಬಾನಿನಲ್ಲಿ ಒಂಟಿ ತಾರೆ ಸೋನೆ ಸುರಿವ ಇರುಳ ಮೋರೆ
ಕತ್ತಲಲ್ಲಿ ಕುಳಿತು ಒಳಗೆ ಬಿಕ್ಕುತಿಹಳು ಯಾರೋ ನೀರೆ

ಹಿಂದೆ ಯಾವ ಜನ್ಮದಲ್ಲೋ ಮಿಂದ ಪ್ರೇಮ ಜಲದ ಕಂಪು
ಬಂದು ಚೀರುವೆದೆಯ ಭಾವ ಹೇಳಲಾರೆ ತಾಳಲಾರೆ

- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ






No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...