ಏನು ಬಲ್ಲೇವರಿ ಒಳ ಕಾರುಬಾರು
ನೂರಾರು ಸೊಕ್ಕಿದ ಕುರಿ ಮೇಯಿಸಿಕೊಂಡು
ಸೆಳೆದಂತೆ ಬಂದೇವು ನಮ್ಮ ಕುರಿ ಹಿಂಡು..
ಏಳುಸುತ್ತಿನ ಬೇಲಿ ಗುಟ್ಟಾಗಿ ಹಚ್ಚಿ
ಇಟ್ಟವ್ರೆ ಕುರಿಗಳ ಚೆನ್ನಾಗಿ ಬಚ್ಚಿ
ಹೊಟ್ಟೆ೦ಬ ಬಾಗಿಲ ಬಲವಾಗಿ ಮುಚ್ಚಿ
ಸಿಟ್ಟೆಂಬ ನಾಯಿಯ ಬಿಟ್ಟೇವ್ರಿ ಬಿಚ್ಚಿ..
ತನುಯೆಂಬುವ ದಡ್ಡಿಯ ಹಸನಾಗಿ ಉಡುಗಿ
ತುಂಬಿ ಚಲ್ಲೇವರಿ ಹಿಕ್ಕಿಯ ಹೆಡಗಿ
ಗುರು ಹೇಳಿದ ಬಾಳು ಹಾಲಿನ ಗಡಗಿ
ನಮ್ಮ ಕೈಲೇ ಇದ್ಯೋ ಅರಿವಿನ ಬಡಗಿ..
ಮೇವು ಹುಲ್ಸಾದಂತ ಮಸಣಿದು ಖರೆಯೇ
ಕುರಿ ಇಲ್ಲಿ ಮೆಯ್ಸಾಕ ಬಂದದ್ದು ಸರಿಯೆ
ತೊಳ ಹಾರಿ ಕುರಿಗಳ ಗೋಣು ಮುರಿಯೆ
ನಾಗಲಿಂಗ ಅಜ್ಜ ಹೇಳಿದ ಪರಿಯೇ..
No comments:
Post a Comment