Thursday, November 2, 2017

ಮೋಹದ ಹೆಂಡತಿ..


ಮೋಹದ ಹೆಂಡತಿ ತೀರಿದ ಬಳಿಕ
ಮಾವನ ಮನೆಯ ಹಂಗಿನ್ಯಾಕೋ.. 

ಸಾವು ನೋವಿಗೆ ಸಾರುವ ಬೀಗನ
ಮಾತಿನ ಹಂಗು ಎನಗ್ಯಾಕೋ.. 

ಖಂಡವನದಿ ಸೋಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾದುವುದ್ಯಾಕೋ.. 

ತಂದೆ ಗೋವಿಂದ ಗುರುವಿನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ

                                                - ಸಂತ ಶಿಶುನಾಳ ಶರೀಫ



No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...