ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..
ಎಲ್ಲ ಸೇರಿ ನನ್ನ ಬಾಯಿಗೆ ಬೆಣ್ಣೆಯ ಮೆತ್ತಿದರಮ್ಮ..
ನೀನೆ ನೋಡು ಬೆಣ್ಣೆ ಗಡಿಗೆ ಸೂರಿನ ನಿಲುವಲ್ಲಿ;
ಹೇಗೆ ತಾನೆ ತೆಗೆಯಲಿ ಅಮ್ಮ ನನ್ನ ಪುಟ್ಟ ಕೈಗಳಲ್ಲಿ..
ಶ್ಯಾಮ ಹೇಳಿದ ಬೆಣ್ಣೆ ಮೆತ್ತಿದ ತನ್ನ ಬಾಯಿ ಒರೆಸುತ್ತ;
ಬೆಣ್ಣೆ ಒರೆಸಿದ ಕೈಯ ಬೆನ್ನ ಹಿ೦ದೆ ಮರೆಸುತ್ತ..
ಎತ್ತಿದ ಕೈಯ ಕಡುಗೋಲನ್ನು ಮೂಲೆಲಿಟ್ಟು ನಕ್ಕಳು ಗೋಪಿ..
ಸೂರದಾಸ ಪ್ರಿಯ ಶ್ಯಾಮನ ಮುತ್ತಿಟ್ಟು ನಕ್ಕಳು ಗೋಪಿ.
- ಹೆಚ್. ಎಸ್. ವೆಂಕಟೇಶ ಮೂರ್ತಿ
No comments:
Post a Comment