Friday, February 16, 2018

ಸ್ವಾಮಿದೇವನೆ ಲೋಕಪಾಲನೆ..

ಚಿತ್ರ: ಸ್ಕೂಲ್ ಮಾಸ್ಟರ್ (1958)
(ನಿರ್ದೇಶನ: ಬಿ. ಆರ್. ಪಂತುಲು) 
ಸಾಹಿತ್ಯ: ಕಣಗಾಲ್ ಪಭಾಕರ ಶಾಸ್ತ್ರಿ
(ಮೂಲ ಸಾಹಿತ್ಯ:  ಸೋಸಲೆ ಅಯ್ಯಾ ಶಾಸ್ತ್ರಿ) 
ಸಂಗೀತ: ಟಿ. ಜಿ. ಲಿಂಗಪ್ಪ  
ಗಾಯನ: ಟಿ. ಜಿ. ಲಿಂಗಪ್ಪ, ಎ. ಪಿ. ಕೋಮಲ ಮತ್ತು ಕೆ. ರಾಣಿ

ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ..
ಪ್ರೇಮದಿಂದಲಿ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ..

ದೇವ ದೇವನೆ ಹಸ್ತ ಪಾದಗಳಿಂದಲೂ ಮನದಿಂದಲೂ..
ನಾವು ಮಾಡಿದ ಪಾಪವೆಲ್ಲವ ಹೋಗಲಾಡಿಸು ಬೇಗನೇ..

ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ..
ಪ್ರೇಮದಿಂದಲಿ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ.. 

ವಿಜಯವಿದ್ಯಾರಣ್ಯ ಕಟ್ಟಿದ ಚಾಮುಂಡಾಂಬೆಯ ನಾಡಿನ..
ಮನೆಯ ಮಕ್ಕಳ ಐಕ್ಯಗಾನವ ಲಾಲಿಸೈ ಪರಿಪಾಲಿಸೈ..

ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ..
ಪ್ರೇಮದಿಂದಲಿ ನೋಡು ನಮ್ಮನು ತೇ ನಮೋಸ್ತು ನಮೋಸ್ತುತೇ..
ಸ್ವಾಮಿದೇವನೆ ಲೋಕಪಾಲನೆ ತೇ ನಮೋಸ್ತು ನಮೋಸ್ತುತೇ. 

No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...