Tuesday, February 20, 2018

ಎಲ್ಲಿರುವೆ ಕಾಣಿಸದೆ ಕರೆವ ಕೊರಳೇ..


ಎಲ್ಲಿರುವೆ ಕಾಣಿಸದೆ ಕರೆವ ಕೊರಳೇ, 
ಎಲ್ಲಿರುವೆ ಹೇಳು ನೀ ನಿಜವೆ ನೆರಳೇ, 

ಮಂಜು ನೇಯುವ ಸಂಜೆಗನಸಿನಂತೆ, 
ಸಂಜೆ ಬಿಸಿಲಿನ ಮಳೆಯ ಮನಸಿನಂತೆ, 
ನಿಂತ ಎದೆಗೊಳದಲ್ಲಿ ಚಿಂತೆ ಬರೆಯಲು ಯಾರು, 
ಎಸೆದ ಕೋಗಿಲೆಯ ದನಿ ಹರಳಿನಂತೆ, 

ನಿನಗೆಂದೆ ನೆಲ ಬಾನು ಕೂಗಿ ಕರೆದೆ, 
ಹೊಲ ಕಾನು ಬನವೆಲ್ಲ ತಿರುಗಿ ನವೆದೆ, 
ಓಡಿ ಬಂದೆನು ಇಗೋ ಪರಿವೆ ಇರದೇ, 
ಓಡಿ ಬರುವಂತೆ ನದಿ ಕಡಲ ಕರೆಗೆ. 

- ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ




No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...