Tuesday, February 20, 2018

ಸಂಜೆ ಬಾನಿನಂಚಿನಲ್ಲಿ..


ಸಂಜೆ ಬಾನಿನಂಚಿನಲ್ಲಿ
ಬಿದ್ದ ಬಿದಿಗೆ ಚಂದಿರ, 
ಶಚೀ ತೀರ್ಥದಾಳದಲ್ಲಿ
ಶಕುಂತಲೆಯ ಉಂಗುರ, 

ದೂರ್ವಾಸರ ಶಾಪವಿಗೋ
ಕವಿಯುತಿಹುದು ಸುತ್ತಲೂ, 
ಕಂಡುದೆಲ್ಲ ಜಾರುತಿಹುದು
ಮೆಲ್ಲನಿರುಳ ತಮದೊಳು, 

ಅಸಹಾಯಕ ತಾರೆಬಳಗ
ಹನಿಗಣ್ಣೊಳು ನೀರವ, 
ಸುಯ್ವ ಗಾಳಿ ತಡೆಯುತಿಹುದು
ಉಕ್ಕಿ ಬರುವ ದುಃಖವ.

- ಜಿ. ಎಸ್. ಶಿವರುದ್ರಪ್ಪ




No comments:

Post a Comment

ನೀನೇ.. ಬರೀ ನೀನೇ..

ಶ್ವಾಸದಲಿ ಜೀವ ಬೆರೆತಂತೆ,  ಪ್ರೀತಿಯಲಿ ಕರುಣೆ ಅಡಗಿದಂತೆ, ಹೃದಯಬಡಿತದಲಿ ಅಡಗಿದ ರಾಗ ತಾಳದಂತೆ,  ಜೀವನದ ರಥಬೀದಿಯ ಪಲ್ಲಕ್ಕಿಯ ಮೇಳದಂತೆ, ನಿನ್ನನೋಡಲೆಂದೇ ಜಗವು...