ಯಾರಿಗುಂಟು ಯಾರಿಗಿಲ್ಲ ಬಾಳೆಲ್ಲ ಬೇವು ಬೆಲ್ಲ,
ಬಂದದ್ದೆಲ್ಲ ನೀಸಬೇಕಯ್ಯ ಗೆಣೆಯ,
ಕಾಣದ್ದಕ್ಕೆ ಚಿಂತೆ ಯಾಕಯ್ಯ,
ಗೋಣು ಹಾಕಿ ಕೂಡ ಬ್ಯಾಡ ಗತ್ತಿನಾಗೆ ಬಾಳ ನೋಡ,
ಏಳು ಬೀಳು ಇರುವುದೇನೆ ಇಲ್ಲಿ ಹುಟ್ಟಿ ಬಂದ ಮೇಲೆ,
ಸುಖ ದುಃಖ ಕಾಡೋದೇನೆ ಉಪ್ಪುಖಾರ ತಿಂದ ಮೇಲೆ,
ಕಷ್ಟ ಮೆಟ್ಟಿ ಸಾಗ ಬೇಕಯ್ಯ ಓ ಗೆಣೆಯ,
ಕೈಯ ಚೆಲ್ಲಿ ಕೊರಗ ಬೇಡಯ್ಯ,
ಪ್ರೀತಿ ಪ್ರೇಮ ನಡೆದ ಮೇಲೆ ತಪ್ಪೋದಿಲ್ಲ ರಾಸಲೀಲೆ,
ಕದ್ದುಮುಚ್ಚಿ ನಡೆಯೋ ವೇಳೆ ಮನಸಿನಲ್ಲಿ ತೂಗುಯ್ಯಾಲೆ,
ಒಳಗೆ ಹೊರಗೆ ಯಾಕೆ ಬೇಕಯ್ಯ ಓ ಗೆಣೆಯ,
ಕಣ್ಣು ತೆರೆದು ಲೋಕ ನೋಡಯ್ಯ.
- ದೊಡ್ಡರಂಗೇಗೌಡ
No comments:
Post a Comment